ಮೈಸೂರು,ಅ,24,2019(www.justkannada.in): ಮಹಾರಾಷ್ಟ್ರ ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಎರಡು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಸತಿ ಸಚಿವ ವಿ.ಸೋಮಣ್ಣ, ಈ ಎರಡೂ ರಾಜ್ಯದ ಗೆಲುವಿನ ಶ್ರೇಯಸ್ಸು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಗೆ ಸಲ್ಲಬೇಕು ಎಂದಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ವಿ.ಸೋಮಣ್ಣ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಮೇಲೆ ಈ ದೇಶಕ್ಕೆ ಒಂದೇ ದೇಶ ಒಂದೇ ಕಾನೂನು ಎಂಬ ಭಾವನೆಗೆ ಜನ ಎಷ್ಟರ ಮಟ್ಟಿಗೆ ಸ್ಪಂದಿಸಿದ್ದಾರೆ ಎನ್ನುವುದಕ್ಕೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ದಿಕ್ಸೂಚಿ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಹಾಗೂ ಎರಡು ರಾಜ್ಯದ ಬಿಜೆಪಿ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿಕೆಶಿಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸ…
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಜಾಮೀನು ಸಿಕ್ಕರುವುದು ಸಂತೋಷ, ಅದನ್ನ ಸ್ವಾಗತಿಸುತ್ತೇನೆ. ಕಾನೂನು ಎಲ್ಲರಿಗೂ ದೊಡ್ಡದು ಎಂದು ಅವರೇ ಹೇಳಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ಅನರ್ಹ ಶಾಸಕರಿಗೆ ಟಿಕೆಟ್ ಬಗ್ಗೆ ಹೈಕಮಾಂಡ್ ನಿರ್ಧಾರ….
ಅನರ್ಹ ಶಾಸಕರಿಗೆ ಟಿಕೆಟ್ ನೀಡಲು ಬಿಜೆಪಿಯಲ್ಲಿ ವಿರೋಧವಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ ಅವರವರ ಭಾವನೆಗಳನ್ನ ಅವರು ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ. ಅಭಿವೃಧ್ಧಿಯನ್ನ ಮಂತ್ರವಾಗಿರಿಸಿಕೊಂಡಿರುವ ರಾಷ್ಟ್ರೀಯ ಪಕ್ಷ ಅಂದ ಮೇಲೆ ಇವೆಲ್ಲಾ ಇರುತ್ತದೆ. ಇದನ್ನ ನಿಭಾಯಿಸುವ ನೈಪುಣ್ಯತೆ ಸಿಎಂ ಬಿಎಸ್ ವೈ ಹಾಗೂ ರಾಷ್ಟ್ರನಾಯಕರಿಗಿದೆ ಎಂದರು.
ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಆಗಮಿಸಿದ್ದೇನೆ. ಇಂದು ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸಿ ಚಾಮುಂಡಿ ಬೆಟ್ಟ, ನಂಜನಗೂಡು ಸೇರಿದಂತೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡುತ್ತೇನೆ. ನಾಳೆ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ. ಮಳೆ ನಿಲ್ಲುವವರೆಗೂ ಯಾವುದೇ ಶಾಶ್ವತ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
Key words: mysore- minister- V.Somanna- pm modi- amith sha- credit- two state- election