ಮೈಸೂರು,ಜನವರಿ,24,2022(www.justkannada.in): ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ಚರ್ಚೆ ಜೋರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ನಾನು ಸಚಿವ ಸ್ಥಾನದ ರೇಸ್‌ನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಂ.ಎಲ್.ಸಿ ಎಚ್ ವಿಶ್ವನಾಥ್ , ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಲೇಬೇಕು. ಹಿರಿಯರಾದ ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಒತ್ತಾಯ ಮಾಡುತ್ತೇನೆ. ಸುಧಾರಣೆಗಾಗಿ ಬದಲಾವಣೆಯಾಗಬೇಕು ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಹಲವು ಶಾಸಕರು ಪಟ್ಟು ಹಿಡಿದಿದ್ದು ಸಚಿವ ಸ್ಥಾನಗಿಟ್ಟಿಸಿಕೊಳ್ಳಲು ಶಾಸಕರಾದ ಎಂ.ಪಿರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಜಿ.ಹೆಚ್ ತಿಪ್ಪಾರೆಡ್ಡಿ ಸೇರಿ ಹಲವರು ಶಾಸಕರು ಲಾಬಿಗೆ ಮುಂದಾಗಿದ್ದಾರೆ.
Key words: mysore-MLC-H.vishwanath