ಮೈಸೂರು,ಜನವರಿ,15,2025 (www.justkannada.in) : ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಹಿನ್ನೆಲೆ ಇಂದು ಸಂಸದ ಸುನಿಲ್ ಬೋಸ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜನವರಿ 31ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ 2ರಂದು ರಥೋತ್ಸವ, ಫೆಬ್ರವರಿ 10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ಟಿ. ನರಸೀಪುರ ತಾಲ್ಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸಂಸದ ಸುನಿಲ್ ಬೋಸ್ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಮುಡುಕುತೊರೆ ಜಾತ್ರೆಗೆ ಇತಿಹಾಸ ಇದೆ. ಜಾತ್ರೆಗೆ ಆಗಮಿಸುವ ಭಕ್ತರಿಗೆ ತೊಂದರೆ ಆಗಬಾರದು. ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು. ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Key words: mysore, Mudukuthore Jatra Mahotsava, MP Sunil Bose