ಮೈಸೂರು,ಆಗಸ್ಟ್,13,2022(www.justkannada.in): ಮೈಸೂರು ಅರಮನೆ ಮಂಡಳಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನ ಆಗಸ್ಟ್ 14 ರಂದು ಸಂಜೆ 7 ರಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮೈಸೂರು ಅರಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭಾ ಕಾರ್ಯಕ್ರಮವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಸಂಜೆ 7:15 ಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ (Virtually) ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಂತರಾಷ್ಟ್ರೀಯ ಕಲಾವಿದ, ಆಪ್ತಮಿತ್ರ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ಮತ್ತು ತಂಡದಿಂದ ರಾತ್ರಿ 8 ಗಂಟೆ ಯಿಂದ 9 ಗಂಟೆಯ ವರೆಗೆ ನೃತ್ಯ ರೂಪಕ ಸೈನಿಕ ಕಾರ್ಯಕ್ರಮ, ರಾತ್ರಿ 9:15 ರಿಂದ 11:15ರ ವರೆಗೆ ಖ್ಯಾತ ಹಿನ್ನಲೆ ಗಾಯಕರಾದ ಅಜಯ್ ವಾರಿಯರ್ ಅಂಕಿತ ಕುಂಡು, ಶಶಿಕಲಾ ಸುನೀಲ್, ನಾಗಚಂದ್ರಿಕಾ ಭಟ್, ರವಿ ಮುರೂರು, ಚಿಂತನ ವಿಕಾಸ್ ಮತ್ತು ತಂಡದವರಿಂದ ವಂದೇ ಮಾತರಂ- ಸಂಗೀತ ಕಾರ್ಯಕ್ರಮ, ನಂತರ ರಾತ್ರಿ 11:30 ರಿಂದ 12ಗಂಟೆಯ ವರೆಗೆ ಮೆll ಲೇಸರ್ವಿಷನ್ ರವರಿಂದ ಲೇಸರ್ ಶೋ ಹಾಗೂ ಬೆಳಿಗ್ಗೆ 10ಗಂಟೆಯಿಂದ 12ಗಂಟೆಯ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಭಜನೆಯ ಕರಾಳತೆ ನೆನಪಿನ ದಿನದ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
Key words: Mysore Palace Board- 75th Independence- Amrita Mahotsava- program –aug 14th