MYSORE POCSO CASE : ಬಿಇಒ ವಶಕ್ಕೆ ಪಡೆದ ಪೊಲೀಸರು.

ಮೈಸೂರು,ಮಾರ್ಚ್,4,2025 (www.justkannada.in): ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸರ್ಕಾರಿ ಶಾಲೆಯಲ್ಲಿ ನಡೆದಿದ್ದ ಶಿಕ್ಷಕನಿಂದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಗಿರೀಶ್ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದಾನೆ.  ಈ ಸಂಬಂಧ ಕರ್ತವ್ಯ ಲೋಪ‌ ತೋರಿದ ಆರೋಪದ ಮೇಲೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಕಾಮುಕ ಶಿಕ್ಷಕ ಗಿರೀಶ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಇಓ ಕಾಂತರಾಜ್, ಸಿಆರ್‌ಪಿ ದೀಪಾ, ECO ಜಯರಾಂ ಅವರನ್ನು ಅಮಾನತು ಮಾಡಿ ಡಿಡಿಪಿಐ ಜವರೇಗೌಡ ಆದೇಶ ಹೊರಡಿಸಿದ್ದಾರೆ.  ಇನ್ನು ಹೆಚ್.ಡಿ.ಕೋಟೆ ಠಾಣಾ ಪೊಲೀಸರು ಬಿಇಓ ಕಾಂತರಾಜು ಅವರನ್ನ ವಶಕ್ಕೆ ಪಡೆದು ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ.

ಹೆಚ್.ಡಿ ಕೋಟೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ಎಂಬಾತ ಜಂತುಹುಳ ಮಾತ್ರೆ ಅಂತ ಮತ್ತು ಬರುವ ಮಾತ್ರೆ ಕೊಟ್ಟು ವಿದ್ಯಾರ್ಥಿನಿಯರ ಮೇಲೆ  ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.

ಮುಖ್ಯ ಶಿಕ್ಷಕ ಗಿರೀಶ್ ಹಲವು ದಿನಗಳಿಂದ ಇದೇ ದುರ್ವರ್ತನೆ ತೋರಿಸುತ್ತಿದ್ದು ಸಾಕಷ್ಟು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ. ಈ ಸಂಬಂಧ ಅದೇ ಶಾಲೆಯ ಶಿಕ್ಷಕರ ಬಳಿ ವಿದ್ಯಾರ್ಥಿನಿಯರು ದೂರು ಹೇಳಿದ್ದು ಪೋಷಕರಿಗೂ ಮಾಹಿತಿ ನೀಡಿದ್ದರು.  ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಬಳಿಕ ಗಿರೀಶ್ ನಾಪತ್ತೆಯಾಗಿದ್ದಾನೆ.

Key words: MYSORE POCSO CASE,  Police, arrested, BEO.