ಮೈಸೂರು,ಜೂ,19,2020(www.justkannada.in): ಭಾರತೀಯ ಯೋಧರ ಮೇಲೆ ಚೀನಾ ಸೈನಿಕರ ದಾಳಿಯನ್ನ ಖಂಡಿಸಿ ಮೈಸೂರಿನಲ್ಲಿ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಸೇನಾ ಪಡೆ ಸದಸ್ಯರು ಹುತಾತ್ಮ ಯೋಧರ ಭಾವಚಿತ್ರ ಹಿಡಿದು ಚೀನಾ ವಿರುದ್ಧ ಧಿಕ್ಕಾರ ಕೂಗಿದರು. ಹಾಗೆಯೇ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಕರೆ ಪ್ರತಿಭಟನಾಕಾರರು ಕರೆ ನೀಡಿದರು.
ಕಳೆದ ಎರಡು ದಿನಗಳ ಹಿಂದೆ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆದು ದೇಶದ 20 ಯೋಧರು ಹುತಾತ್ಮರಾಗಿದ್ದರು. ಹಾಗೆಯೇ ಸಂಘರ್ಷದಲ್ಲಿ ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.
Key words: mysore-protest- china-conflict-indian soldier