ಮೈಸೂರು,ಡಿಸೆಂಬರ್,15,2022(www.justkannada.in): ಹಿಂದುಳಿದ ವರ್ಗ 2ಎ ಮತ್ತು ಪ್ರವರ್ಗ-1ರ ಮೀಸಲಾತಿಯನ್ನು ಹೆಚ್ಚಿಸಲು ಆಗ್ರಹಿಸಿ ಹಾಗೂ ಎಸ್.ಸಿ., ಎಸ್.ಟಿ. ಮತ್ತು ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ವೇದಿಕೆ ಸಂಚಾಲಕ ಕೆ.ಎಸ್.ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು. ಆರ್ಥಿಕವಾಗಿ ಹಿಂದುಳಿದ ಶೇ. 4ರಷ್ಟಿರುವ ಮೇಲ್ವರ್ಗದ ಸಮುದಾಯಗಳಿಗೆ ಶೇ.10 ರಷ್ಟು ಮೀಸಲಾತಿ ಕೊಟ್ಟಿದೆ. ಆದರೆ ಶೇ.62 ರಷ್ಟು ಹಿಂದುಳಿದ ವರ್ಗಗಳಿಗೆ ಕೇವಲ 19 ರಷ್ಟು ಮೀಸಲಾತಿ ಕೊಟ್ಟಿದ್ದೀರಿ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
Key words: mysore- Protest – demanding- increase – reservation – Backward Class- 2A – Class 1