ಮೈಸೂರು,ನವೆಂಬರ್,19,2020(www.justkannada.in): ಏಷಿಯನ್ ಪೈಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ್ದ ಹಿಮ್ಮಾವು ರೈತರಿಗೆ ನ್ಯಾಯ ನೀಡಬೇಕು. ರೈತರಿಗೆ ನ್ಯಾಯ ದೊರಕಿಸಿಕೊಡಲು ಇದೇ 23 ರಂದು ಏಷಿಯನ್ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.
ಏಷಿಯನ್ ಪೈಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ್ದ ಹಿಮ್ಮಾವು ರೈತರಿಗೆ ನ್ಯಾಯ ನೀಡುವಂತೆ ಒತ್ತಾಯಿಸಿ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ, ಭೂಮಿ ನೀಡಿರುವ ರೈತರಿಗೆ ಅದೇ ಜಾಗದಲ್ಲಿ ಕೆಲಸ ನೀಡುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕಾರ್ಖಾನೆ ಆಡಳಿತ ಮಂಡಳಿಯವರ ಜೊತೆ ರೈತರೇ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಹೇಳುತ್ತಾರೆ. ಇದು ಜಿಲ್ಲಾಡಳಿತದ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ಒಂದೋ ಹಿಮ್ಮಾವಿನ ರೈತರಿಗೆ ಅದೇ ಜಾಗದಲ್ಲಿ ಕೆಲಸ ನೀಡಬೇಕು ಇಲ್ಲವೇ ಕೊಟ್ಟ ಭೂಮಿಯನ್ನು ರೈತರಿಗೆ ಮರಳಿಸಬೇಕು. ರೈತರಿಗೆ ನ್ಯಾಯ ದೊರಕಿಸಿಕೊಡುವುದಕ್ಕಾಗಿ ಇದೇ 23 ರಂದು ಏಷಿಯನ್ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು ಎಂದು ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.
Key words: mysore- protest -justice -farmers – land to – Asian Paints factory-Badgalpur Nagendra