ಮೈಸೂರು,ಆಗಸ್ಟ್,26,2020(www.justkannada.in): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿರುವ ಘಟನೆಯನ್ನ ಖಂಡಿಸಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಪ್ರದೇಶ ಕುರುಬರ ಸಂಘ, ದಲಿತ ಸಂಘಟನೆಗಳ ಒಕ್ಕೂಟ, ರಾಜ್ಯ ಹಿಂದುಳಿದವರ್ಗಗಳ ಜಾಗೃತಿ ವೇದಿಕೆ ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪುನರ್ ಸ್ಥಾಪಿಸುವಂತೆ ಆಗ್ರಹಿಸಿದರು.
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ರಾಯಣ್ಣ ಅವರ ಪ್ರತಿಮೆ ಹಾಗೂ ಕನ್ನಡಪರ ಹೋರಾಟಗಾರರ ಮೇಲೆ ದೌರ್ಜನ್ಯ ನಡೆದಿದೆ. ಸಂಗೊಳ್ಳಿ ರಾಯಣ್ಣ ಜಯಂತಿಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಓರ್ವ ಇತಿಹಾಸ ಪುರುಷನಿಗೆ ಜಿಲ್ಲಾಡಳಿತ ಅಪಮಾನ ಮಾಡಿರುವುದು ಖಂಡನೀಯ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಂಡ ಸ್ಥಳದಲ್ಲೇ ಪ್ರತಿಮೆ ಪುನರ್ ಸ್ಥಾಪಿಸಬೇಕು. ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
Key words: mysore- protest- sangolli Rayanna-statue-restructure