ಮೈಸೂರು,ಸೆಪ್ಟಂಬರ್,14,2020(www.justkannada.in): ಹಿಂದಿ ಮತ್ತು ಸಂಸ್ಕೃತ ಭಾಷೆ ಹೇರಿಕೆ ವಿರೋಧಿಸಿ ಮೈಸೂರಿನಲ್ಲಿ ಕನ್ನಡ ಪರ ಸಂಘಟನೆ ಮತ್ತು ಪ್ರಗತಿಪರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡ ಸಂಘಟನೆ ಮತ್ತು ಪ್ರಗತಿಪರ ಒಕ್ಕೂಟದ ಸದಸ್ಯರು ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಉನ್ನತ ಶಿಕ್ಷಣದವರೆಗೂ ಕನ್ನಡ ಕಡ್ಡಾಯವಾಗಬೇಕು. ಕನ್ನಡ ಭಾಷೆಗೆ ತನ್ನದೇ ಆದ ಸಂಸ್ಕೃತಿ, ಇತಿಹಾಸವಿದೆ. ಇಂತಹ ಭಾಷೆಗಳನ್ನು ಉಳಿಸುವುದು, ಬೆಳೆಸುವುದು ಅನಿವಾರ್ಯ. ಹೀಗಾಗಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು. ಜತೆಗೆ ತ್ರಿಭಾಷಾ ನೀತಿಯನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Key words: Mysore- protests- against- imposition -Hindi