ಕರೋನಾ ನಿಯಂತ್ರಣ ಬಳಿಕ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ : ಸಚಿವ ಆರ್. ಅಶೋಕ್ ಆಶ್ವಾಸನೆ.

ಮೈಸೂರು, ಜು.15, 2020 : (www.justkannada.in news ) : ಬ್ರಾಹ್ಮಣರಿಗೂ ಜಾತಿ ಪ್ರಮಾಣ ಪತ್ರ ನೀಡಬೇಕೆಂಬ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು ಹೇಳಿದ್ದಿಷ್ಟು..

jk-logo-justkannada-logo

ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಮತ್ತು ಬ್ರಾಹ್ಮಣ ಮಹಾಸಭಾ ಸೇರಿದಂತೆ ಹಲವರಿಂದ ಈ ಬಗ್ಗೆ ಬೇಡಿಕೆ ಇತ್ತು. ಕೇಂದ್ರ ಸರ್ಕಾರ ಶೇ.10 ರಷ್ಟು ಜನರಲ್ ಮೀಸಲಾತಿ ನೀಡಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರ ನಿಗಮ ಸ್ಥಾಪನೆ ಮಾಡಿದೆ. ಜಾತಿ ಪ್ರಮಾಣ ಪತ್ರ ನೀಡುವ ಸೌಲಭ್ಯವೇ ಇರಲಿಲ್ಲ. ಹೀಗಾಗಿ ಫಲಾನುಭವಿಗಳನ್ನು ಗುರುತಿಸುವುದು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬ್ರಾಹ್ಮಣರಿಗೂ ಜಾತಿ ಪ್ರಮಾಣ ಪತ್ರ ನೀಡಲು ನಿರ್ಧರಿಸಲಾಗಿದೆ.

ಕಂದಾಯ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಜಾರಿಗೆ ಆದೇಶ ಕೊಟ್ಟಿದ್ದೇನೆ. ಆದರೆ ನಮ್ಮ ಇಲಾಖೆ ಅಧಿಕಾರಿಗಳು ಈಗಾಗಲೇ ಕರೊನಾ ವಾರಿಯರ್​ಗಳಾಗಿ ಕೆಲಸ ಮಾಡುತ್ತಿದ್ದಾರೆ. ಇದೆಲ್ಲವೂ ಬಗೆಹರಿದ ಬಳಿಕ ಬ್ರಾಹ್ಮಣರಿಗೂ ತಮ್ಮ ಜಾತಿ ಹೆಸರಿನಲ್ಲಿ ಪ್ರಮಾಣ ಪತ್ರ ದೊರೆಯಲಿದೆ ಎಂದು ಅಭಯ ನೀಡಿದರು.

ಮೈಸೂರು ಲಾಕ್​ಡೌನ್ ವಿಚಾರ.

Mysore-r.ashoka-minister-Bahamians-caste-certificate-after-corona-controlled

ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗೆ ಪರಮಾಧಿಕಾರ. ಮೈಸೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ. ಮೈಸೂರಲ್ಲೂ ಕರೊನಾ ಕೇಸ್​ಗಳು ಹೆಚ್ಚಾಗಿವೆ. ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ನಿನ್ನೆ ಸಿಎಂ ವಿಡಿಯೋ ಸಂವಾದ ನಡೆಸಿದ್ದರು. ಲಾಕ್​ಡೌನ್ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಡಿಸಿಗಳಿಗೆ ಆದೇಶ ನೀಡಿದ್ದೇವೆ. ಇಲ್ಲಿನ ಪರಿಸ್ಥಿತಿ ನೋಡಿ ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುತ್ತಾರೆ. ಮೈಸೂರಿನಲ್ಲಿ ಆರ್.ಅಶೋಕ್ ಹೇಳಿಕೆ.

oooo

key words : Mysore-r.ashoka-minister-Bahamians-caste-certificate-after-corona-controlled