ಮೈಸೂರು,ಡಿಸೆಂಬರ್,26,2020(www.justkannada.in) : ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್ ಮೈಸೂರು ಹಾಗು ಚಾಮರಾಜಪುರಂ ರೈಲ್ವೆ ನಿಲ್ದಾಣಗಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ರೈಲು-ಬಳಕೆದಾರರ ಅನುಕೂಲಕ್ಕಾಗಿ ನಿಲ್ದಾಣದಲ್ಲಿ ಸ್ಥಾಪಿಸಲಾದ ಗಣಕೀಕೃತ ಪ್ರಯಾಣಿಕರ ಕಾಯ್ದಿರಿಸುವ ಟಿಕೆಟ್ ವ್ಯವಸ್ಥೆಯನ್ನು(ಪಿ.ಆರ್.ಎಸ್.) ನಿಯೋಜಿಸಲಾಯಿತು.
ಚಾಮರಾಜಪುರಂ ರೈಲ್ವೆ ನಿಲ್ದಾಣದ ಪ್ರಯಾಣಿಕರ ಕಾಯ್ದಿರಿಸುವ ಟಿಕೆಟ್ ವ್ಯವಸ್ಥೆಯು ವಾರದ ದಿನಗಳಲ್ಲಿ (ಭಾನುವಾರ ಹೊರತುಪಡಿಸಿ) 10ರಿಂದ 12ರವರೆಗೆ ಮತ್ತು 3ರಿಂದ 6 ರವರೆಗೆ ಹಾಗು ಭಾನುವಾರ ಬೆಳಗ್ಗೆ 10ರಿಂದ 12ರವರೆಗೆ ಕಾರ್ಯನಿರ್ವಹಿಸುತ್ತದೆ.ಮೈಸೂರಿನಿಂದ ಪ್ರಯಾಣಿಕರ ಸೇವೆಗಳನ್ನು ಕ್ರಮೇಣ ಪುನರಾರಂಭಿಸಿದ ನಂತರ ಎ.ಕೆ.ಸಿಂಗ್ ಅವರು ಮೈಸೂರು ರೈಲ್ವೆ ನಿಲ್ದಾಣ ಮತ್ತು ಪಿಟ್ ಲೈನ್ ಗಳನ್ನು ಪರಿಶೀಲಿಸಿದರು. ಪರಶೀಲನೆ ವೇಳೆ ಮೈಸೂರು ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
key words : Mysore-Railway-Station-pitline-Ajay Kumar Singh- reviewed …