ಮೈಸೂರು,ಮೇ,16,2019(www.justkannada.in): ಆರೋಪಿಗಳನ್ನ ಅರೆಸ್ಟ್ ಮಾಡುವ ವೇಳೆ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ಆರೋಪಿಗಳ ಮೇಲೆ ಫೈರ್ ಮಾಡಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದಾನೆಂದು ಮೈಸೂರು ಪೊಲೀಸ್ ಕಮಿಷನರ್ ಕೆ.ಟಿ ಬಾಲಕೃಷ್ಣ ತಿಳಿಸಿದ್ದಾರೆ.
ಆರೋಪಿಗಳ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ, ಅಮಾನೀಕರಣ ನೋಟನ್ನು ಬದಲಾಯಿಸುವ ವ್ಯಕ್ತಿಗಳು ಬಂದಿದ್ದಾರೆ ಎಂದು ಮಾಹಿತಿ ಬಂದಿತ್ತು.ಈ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನ ಬಂಧಿಸಲು ವಿಜಯನಗರ ಠಾಣೆ ಇನ್ಸ್ ಪೆಕ್ಟರ್ ಹೋಗಿದ್ದರು. ಅವರನ್ನು ಅರೆಸ್ಟ್ ಮಾಡುವ ವೇಳೆ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಕುಮಾರ್ ಆರೋಪಿಗಳ ಮೇಲೆ ಫೈರ್ ಮಾಡಿದ್ದಾರೆ. ಸುಮಾರು ಬೆಳಿಗ್ಗಿ ೯.೧೫ ರಿಂದ ೯.೪೫ ರ ಸಮಯದಲ್ಲಿ ಘಟನೆ ನಡೆದಿದೆ. ಈ ವೇಳೆ ಓರ್ವ ಸಾವನಪ್ಪಿದ್ದಾನೆ. ಪ್ರಕರಣದಲ್ಲಿ ಮೂವರು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು.
ಎಲ್ಲರನ್ನು ಇನ್ಸ್ ಪೆಕ್ಟರ್ ನೋಡಿದ್ದಾರೆ. ಸದ್ಯ ಇನ್ಸ್ ಪೆಕ್ಟರ್ ಫೈರ್ ಮಾಡಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಪ್ರಕಾರ ತನಿಖೆ ಮಾಡಲಾಗುತ್ತೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ. ನಮ್ಮ ವೆಪನ್ ಗಳು ಯಾವುವು ಕಳುವಾಗಿಲ್ಲ. ಸತ್ತಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದ ತಕ್ಷಣ ಅವರ ಕುಟುಂಬಸ್ಥರಿಗೆ ತಿಳಿಸುತ್ತೇವೆ ಎಂದು ಹೇಳಿದರು.
Key words: mysore-Shootout –case- Firing – attack- police commissioner -KT Balakrishna