ಮೈಸೂರು,ಅಕ್ಟೋಬರ್,22,2020(www.justkannada.in): ನಿಯಮ ಬಾಹಿರವಾಗಿ ಕಾರ್ಮಿಕರನ್ನ ಕೆಲಸದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ಬಳಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ ಸದಸ್ಯರು ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದಕ್ಕೆ 39 ಕಾರ್ಮಿಕರನ್ನ ಆಡಳಿತ ಮಂಡಳಿ ಅಮಾನತು ಮಾಡಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಕಾರ್ಮಿಕರ ಅಮಾನತನ್ನು ವಾಪಸ್ಸ್ ಪಡಯಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ದಸರಾ ಕಾರ್ಯಕ್ರಮಕ್ಕೆ ಆಗಮಿಸುವ ಸಿಎಂಗೆ ಘೇರಾವ್ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
Key words: mysore-suspension-labor-Protest -Silk Weaving -Factory -workers.