ಮೈಸೂರು,ಜೂ,10,2020(www.justkannada.in): ಮೈಸೂರು ಜಿಲ್ಲೆ ವರಕೋಡು ಗ್ರಾಮದ ಬೀರೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು.
ವರಕೊಡು ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ ವೇಳೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಹಾರಹಾಕಲು ಕಾರ್ಯಕರ್ತರು ಮುಗಿಬಿದ್ದ ದೃಶ್ಯ ಕಂಡು ಬಂತು.
ಇನ್ನು ಗ್ರಾಮದ ಬೀರೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಸೇರ್ಪಡೆಯಾಗಿದ್ದರು ಎನ್ನಲಾಗಿದೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿದ್ಧರಾಮಯ್ಯ, ಧಾರ್ಮಿಕ ಆಚರಣೆಗಳಿಗೆ ನಮ್ಮ ವಿರೋಧವಿಲ್ಲ. ದೇವಸ್ಥಾನ ಜೀರ್ಣೋದ್ಧಾರಕ್ಕೆ ನನ್ನ ಸಹಮತವಿದೆ. ಕೋವಿಡ್ 19 ಖಾಯಿಲೆ ದೇಶಾದ್ಯಂತ ವ್ಯಾಪಕವಾಗಿ ಹರಡಿದೆ. ಹೀಗಾಗಿ ಎಲ್ಲರೂ ಸಾಮಾಜಿಕ ಅಂತರ ಪಾಲನೆ ಮಾಡಿ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ಎಂದು ಸಲಹೆ ನೀಡಿದರು.
ಹಾಗೆಯೇ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ಗೊತ್ತಿದ್ದರೆ ಕಾರ್ಯಕ್ರಮಕ್ಕೆ ಬರುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Key words: mysore- temple- Program-former CM-siddaramaiah