ಮೈಸೂರು,ಜ,30,2020(www.justkannada.in): ಚಾಮುಂಡಿ ಬೆಟ್ಟದಲ್ಲಿ ಜೀವ ವೈವಿಧ್ಯ ಪಾರಂಪರಿಕ ತಾಣ ಎಂಬುದನ್ನ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದರು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗಿದೆ. ಜೀವ ವೈವಿಧ್ಯ ಸಂರಕ್ಷಣೆಗೆ ತೆಗದುಕೊಳ್ಳಬಹುದಾ ಕ್ರಮಗಳ ಕುರಿತು ಚರ್ಚೆ ಮಾಡಲಾಗಿದೆ. ಕೆಆರ್ ಎಸ್ ಸಂರಕ್ಷಣೆ ನಿಟ್ಟಿನಲ್ಲಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿರವ ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಜೀವ ವೈವಿಧ್ಯ ಪಾರಂಪರಿಕ ತಾಣ ಎಂಬುದನ್ನ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಈ ಬಗ್ಗೆ ಸ್ಥಳೀಯ ಗ್ರಾಮಪಂಚಾಯಿತಿಯ ಜೀವ ವೈವಿಧ್ಯ ಸಮಿತಿ ಅಥವಾ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಶಿಫಾರಸ್ಸು ಮಾಡಬೇಕಿದೆ. ಈ ಕುರಿತು ವರಿದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಅನಂತ ಹೆಗಡೆ ತಿಳಿಸಿದರು.
ಲಕ್ಷ್ಮಣ ತೀರ್ಥ ನದಿ ಶುದ್ಧೀಕರಣ ಪರಿಸರ ಉಳಿವಿನ ಬಗ್ಗೆ ವಿಶೇಷ ಕಾರ್ಯಕ್ರಮ ರೂಪಿಸಲು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದೆ. ಹುಣಸೂರು ನಗರ ಸಭೆ ಮುಂದಾಳತ್ವದಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುವುದು. ಮತ್ತು ಪ್ರತಿ ವರ್ಷ ಮೇ 22 ರಂದು ಅಂತರ ರಾಷ್ಟೀಯ ಜೀವ ವೈವಿಧ್ಯ ದಿನ ಆಚರಿಸಲು ಎಲ್ಲಾ ಜೀವ ವೈವಿಧ್ಯ ಸಮಿತಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ಮೈಸೂರು ಜಿಪಂ ಸಿಇಓ ಜ್ಯೋತಿ, ಡಿಸಿಎಫ್ ಪ್ರಶಾಂತ್ ಭಾಗಿಯಾಗಿದ್ದರು.
Key words: mysore-Thinking – declaring -Chamundi Hill – biodiversity heritage -Anantha Hegde