ಮೈಸೂರು, ನವೆಂಬರ್ 14, 2021 (www.justkannada.in): ಡೆತ್ ನೋಟ್ ಬರೆದು ಟ್ರಾಫಿಕ್ ASI ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಸೈ ಶಿವಕುಮಾರಸ್ವಾಮಿ (54) ಆತ್ಮಹತ್ಯೆಗೆ ಶರಣಾದವರು.
ಮೈಸೂರಿನ ಗೌರಿ ಶಂಕರ ನಗರದಲ್ಲಿ ಘಟನೆ ನಡೆದಿದ್ದು, ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.