ಮೈಸೂರು,ಆ,13,2020(www.justkannada.in): ಮಹಾಮಾರಿ ಕೊರೋನಾದಿಂದಾಗಿ ಮುಂದೂಡಲಾಗಿದ್ದ ಪದವಿ ಪರೀಕ್ಷೆಗಳನ್ನ ನಡೆಸಲು ಮೈಸೂರು ವಿಶ್ವ ವಿದ್ಯಾನಿಲಯ ಸಿದ್ಧತೆ ನಡೆಸಿದೆ.
ಸೆಪ್ಟೆಂಬರ್ ಮೊದಲ ಆಥವಾ ಎರಡನೇ ವಾರದಲ್ಲಿ ಮೈಸೂರು ವಿವಿ ಪದವಿ ಪರೀಕ್ಷೆಗಳಿಗೆ ನಡೆಯಲಿದ್ದು, ಪರೀಕ್ಷೆಗಾಗಿ ಸಿದ್ದತೆ ನಡೆಸಲಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹಾಗೆಯೇ ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯಾ ವರ್ಷದ ಹಿಂದಿನ ಸೆಮಿಸ್ಟರ್ ಸರಾಸರಿ ಆಧರಿಸಿ ಅಂಕ ಕೊಡಲಾಗುತ್ತದೆ. ಒಂದು ವೇಳೆ ಈ ಅಂಕ ವಿದ್ಯಾರ್ಥಿಗಳಿಗೆ ತೃಪ್ತಿಯಾಗದಿದ್ದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಆದರೆ ಅಂತಿಮ ವರ್ಷದ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಎಲ್ಲಾ ಪಠ್ಯಗಳನ್ನು ಪೂರ್ಣಗೊಳಿಸಲಾಗಿದೆ. ಆದರೂ ಸಹ ವಿದ್ಯಾರ್ಥಿಗಳಿಗೆ ಅವಶ್ಯಕತೆ ಇದ್ದರೆ 10 ದಿನಗಳ ತರಗತಿ ನಡೆಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿ ಸಲಹೆ ಪಡೆಯಬಹುದು ಎಂದು ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಹೇಳಿದ್ದಾರೆ.
Key words: Mysore university- Degree- Examination- VC-Prof.G.Hemant Kumar