ಮೈಸೂರು,ಆ,15,2020(www.justkannada.in): ರಾಜ್ಯದಲ್ಲಿ ಕೊರೋನಾ , ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು, ಉದ್ಯೋಗಿಗಳು ಧಾವಿಸಿದ್ದಾರೆ.
ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು ಮತ್ತು ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನವನ್ನ ಸಿಎಂ ಪರಿಹಾರ ನಿಧಿ ಕೋವಿಡ್-19 ಗೆ ನೀಡಿದ್ದಾರೆ. ಏಪ್ರಿಲ್ ತಿಂಗಳ ಒಂದು ದಿನದ ವೇತನವನ್ನ ಅಂದರೆ ಒಟ್ಟು 30, 17,000 ರೂಪಾಯಿ ಅನ್ನ ಸಿಎಂ ಪರಿಹಾರ ನಿಧಿಗೆ ನೀಡಲಾಗಿದೆ.
ಇಂದು ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ನೆರವಿನ ಚೆಕ್ ಅನ್ನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಶಾಸಕ ಜಿ.ಟಿ ದೇವೇಗೌಡ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Key words: Mysore university- faculty -assist -Corona victims-one day –salary- CM compensation fund.