ಮೈಸೂರು,ಮಾ,13,2020(www.justkannada.in): ಪಾಠ ಮಾಡುತ್ತಿದ್ದ ವೇಳೆ ತರಗತಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕಿ ಡಾ.ಎನ್.ಸಿ.ಸುಮತಿ ಅವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾರ್ಚ್ 9 ಮತ್ತು 10ರಂದು ಬೆಳಿಗ್ಗೆ 10ಗಂಟೆಯ ವೇಳೆಗೆ ಎಂ.ಎ.ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗ ಕೆಲವು ವಿದ್ಯಾರ್ಥಿಗಳು ತರಗತಿಗೆ ನುಗ್ಗಿ ಪಾಠ ಮಾಡದಂತೆ ಅಡ್ಡಿಪಡಿಸಿದ್ದಾರೆ. ದೈಹಿಕವಾಗಿ ತಳ್ಳಿ ಹಲ್ಲೆ ನಡೆಸಿದ್ದಾರೆ ಎಂದು ಅತಿಥಿ ಉಪನ್ಯಾಸಕಿ ಡಾ.ಎನ್.ಸಿ.ಸುಮತಿ ಅವರು ದೂರಿನಲ್ಲಿ ತಿಳಿಸಿದ್ದು, ಈ ಕುರಿತು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Key words: Mysore university-guest lecturer –complaint- police –against- students.