ಮೈಸೂರು,ಡಿ,11,2019(www.justkannada.in): ಕರ್ನಾಟಕ ರಾಜ್ಯ ಸರ್ಕಾರವು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಡಾ.ಈ.ಸಿ.ನಿಂಗರಾಜ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಪಾಂಡವಪುರ ತಾಲ್ಲೂಕಿನ ಈರೇಗೌಡನಕೊಪ್ಪಲು ಡಾ.ಈ.ಸಿ.ನಿಂಗರಾಜ್ ಗೌಡ ಇವರು, MLISc., M.Phil., MA., PGDHRM., PGDMCJ., DRD., Ph.D., ಶಿಕ್ಷಣವನ್ನು ಪಡೆದಿದ್ದಾರೆ. ಈ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ಹಣಕಾಸು ಸಮಿತಿ ಮತ್ತು ಶಿಕ್ಷಣ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಪ್ರಸ್ತುತ ಮೈಸೂರಿನ ಗ್ರಂಥಪಾಲಕ ಮತ್ತು ಮಾಹಿತಿ ವಿಜ್ಞಾನಿಗಳ ಸಂಘ ( MyLISA )ದ ಅಧ್ಯಕ್ಷರಾಗಿಯೂ, ಪೂರ್ಣವಿಕಾಸ ಸೇವಾ ಟ್ರಸ್ಟ್ ಅಧ್ಯಕ್ಷರಾಗಿಯೂ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಮಂಡ್ಯ ಕಲಾತಪಸ್ವಿ ಟ್ರಸ್ಟ್ ನ ಗೌರವ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರ ನೇಮಕಕ್ಕೆ ಕಾರಣರಾದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ರವರಿಗೂ ಮತ್ತು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ರವರಿಗೂ, ಸಂಘ-ಪರಿವಾರದ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಹಿರಿಯ ಕಾರ್ಯಕರ್ತರಿಗೂ ಡಾ. ಈ.ಸಿ. ನಿಂಗರಾಜ್ ಗೌಡ ಅವರು ವಂದನೆಗಳನ್ನು ಸಲ್ಲಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬೆಳವಣಿಗೆಗೆ ತಮ್ಮ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡುವವರು ದೂರವಾಣಿ ಸಂಖ್ಯೆ: 9980184789 ಸಂಪರ್ಕಿಸಬಹುದಾಗಿದೆ.
Key words: Mysore University- Syndicate member E. C. Ningaraj Gowda -appointed.