ಬೆಂಗಳೂರು, ಅ.19, 2021 : (www.justkannada.in news) : ವಿಶ್ರಾಂತ ಕುಲಪತಿ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆರ್.ನಿರಂಜನ ಅವರನ್ನು ಈ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರೊ.ಎಸ್.ಆರ್.ನಿರಂಜನ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಾಳೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಶಸ್ತಿ ಪ್ರಧಾನ ಮಾಡುವರು.
ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಪ್ರಶಸ್ತಿ ನೀಡಿ ಗೌರವಿಸುವರು.
ಬಯೋ ಡ್ಯಾಟ:
ಮೈಸೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿ ಬಳಿಕ ಸಂಶೋಧನಾ ವಿದ್ಯಾರ್ಥಿಯಾಗಿ ನಂತರ ಅದೇ ವಿವಿಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದ ಪ್ರೊ.ಎಸ್.ಆರ್.ನಿರಂಜನ, ಬಳಿಕ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸಹ ಸೇವೆ ಸಲ್ಲಿಸಿ ಬಳಿಕ ಮೈಸೂರು ವಿವಿಗೆ ಹಿಂದಿರುಗಿದ್ದರು. ಇದೀಗ ಮೈಸೂರು ವಿವಿ ಪ್ರಾಧ್ಯಾಪಕ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
key words : Mysore-university-valmiki-award-prof.s.r.niranjana-Bangalore