ಮೈಸೂರು, ಸೆಪ್ಟೆಂಬರ್, 04,2020(www.justkannada.in) ; ಮೈಸೂರು ವಿವಿಯ ಉತ್ತಮ ಕ್ರೀಡಾಪಟುಗಳಿಗೆ ಪ್ರಸ್ತುತ ನೀಡುತ್ತಿರುವ ವಿದ್ಯಾರ್ಥಿವೇತನವನ್ನು 3ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸುವುದಕ್ಕೆ ಅನುಮೋದನೆ ದೊರೆಯಿತು.
ಶುಕ್ರವಾರ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಸಿಂಡಿಕೇಟ್ ಸದಸ್ಯ ಡಾ.ಇ.ಸಿ.ನಿಂಗರಾಜ್ ಗೌಡ, 2020-2021ನೇ ಸಾಲಿನಿಂದ ವಿಶ್ವವಿದ್ಯಾನಿಲಯ ಉತ್ತಮ ಕ್ರೀಡಾಪಟುಗಳಿಗೆ ಪ್ರಸ್ತುತ ನೀಡುತ್ತಿರುವ ವಿದ್ಯಾರ್ಥಿವೇತನವನ್ನು 3 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಸಲಹೆ ನೀಡಿದರು.
ಈ ಸಂಬಂಧ ಸಭೆಯಲ್ಲಿ ಚರ್ಚಿಸಿ ವಿಶ್ವವಿದ್ಯಾನಿಲಯ ಉತ್ತಮ ಕ್ರೀಡಾಪಟುಗಳಿಗೆ ಪ್ರಸ್ತುತ ನೀಡುತ್ತಿರುವ ವಿದ್ಯಾರ್ಥಿವೇತನವನ್ನು 2020-21ನೇ ಸಾಲಿನಿಂದ 5ಸಾವಿರ ರೂ,ಗಳಿಗೆ ಹೆಚ್ಚಿಸಲು ಸಭೆಯು ಒಪ್ಪಿ ಅನಿಮೋದನೆ ನೀಡಿತು.
ಮಾನಸ -2021 ವಸ್ತು ಪ್ರದರ್ಶನ
ಶತಮಾನೋತ್ಸವದ ಸಂದರ್ಭದಲ್ಲಿರುವ ಮೈಸೂರು ವಿವಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ರ್ಯಾಂಕಿಂಗ್ ವ್ಯವಸ್ಥೆಯ ಪಟ್ಟಿಯಲ್ಲಿ 27ನೇ ಸ್ಥಾನ ಪಡೆದಿದೆ. ಜತೆಗೆ ನೂರನೇ ಘಟಿಕೋತ್ಸವದ ನೆನಪಿಗಾಗಿ ವಿವಿಯ ಸಂಶೋಧನೆ ಮತ್ತು ಶೈಕ್ಷಣಿಕ ಸಾಧನೆಗಳನ್ನು ಪರಿಚಯಿಸುವ ಸಲುವಾಗಿ ಮಾನಸ -2021 ವಸ್ತುಪ್ರದರ್ಶನ ಏರ್ಪಡಿಸಲು ಸಿಂಡಿಕೇಟ್ ಸಭೆ ಅನುಮೋದನೆ ನಿಡಿದೆ.
ಏಳು ದಿನಗಳ ಕಾಲ ಈ ಪ್ರದರ್ಶನ ನಡೆಯಲಿದ್ದು, ಮೈಸೂರು ವಿವಿಯ ಸಮಗ್ರ ಅಭಿವೃದ್ಧಿ ಹಾಗೂ ಸಾಧನೆಗಳ ಚಿತ್ರಣ ಈ ಪ್ರದರ್ಶನದಲ್ಲಿ ಕಂಡು ಬರಲಿದೆ ಎಂದು ಸಿಂಡಿಕೇಟ್ ಸದಸ್ಯ ಡಾ.ಇ.ಸಿ.ನಿಂಗರಾಜ್ ಗೌಡ ತಿಳಿಸಿದರು.
key words ; Mysore VV-increase-sports-pay-from-this-line