ದಾವಣಗೆರೆ,ನವೆಂಬರ್,29,2021(www.justkannada.in): ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತದೆ ಎಂಬ ವದಂತಿಗಳು ಹಬ್ಬಿರುವ ಹಿನ್ನೆಲೆ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ದಾವಣಗೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಂದೆ ಲಾಕ್ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಲಾಕ್ ಡೌನ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ನಿಗೂಢ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಐಸಿಎಂಆರ್ಗೆ ಕಳುಹಿಸಿದ್ದೇವೆ, ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.
ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಅಲ್ಲದೇ ವಿದೇಶಗಳಿಂದ ಬಂದವರನ್ನ ಪರೀಕ್ಷೆ ಮಾಡಲಾಗಿದೆ. ಕೇರಳದಿಂದ ಬಂದ ಪ್ರತಿಯೊಬ್ಬರಿಗೂ ಟೆಸ್ಟ್ ಮಾಡಲಾಗ್ತಿದೆ. ಒಮಿಕ್ರಾನ್ ಬಗ್ಗೆ ರಾಜ್ಯದ ಜನ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು. ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲು ಆಗಲ್ಲ. ಶಾಲಾ-ಕಾಲೇಜುಗಳಲ್ಲಿ ಕೊವಿಡ್ ಬಗ್ಗೆ ನಿಗಾಗೆ ಸೂಚಿಸಿದ್ದೇವೆ. ಶಾಲಾ- ಕಾಲೇಜುಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.
Key words: mysterious- infection- symptom -someone – South Africa-CM Basavaraj Bommai