ಬೆಂಗಳೂರು,ಏಪ್ರಿಲ್,06,2021(www.justkannada.in) : ಮಹಾರಾಷ್ಟ್ರ, ಛತ್ತಿಸಗಢ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ 50 ಉನ್ನತಮಟ್ಟದ ಬಹುಶಿಸ್ತಿನ ಸಾರ್ವಜನಿಕ ಆರೋಗ್ಯ ತಂಡಗಳು 3 ರಾಜ್ಯಗಳ 50 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಕೋವಿಡ್ ಲಸಿಕೆ ಹಾಕುವ ಅಭಿಯಾನ ಪ್ರಗತಿಯಲ್ಲಿದ್ದು. ಈವರೆಗೆ 7 ಕೋಟಿ 91 ಲಕ್ಷ ಜನರಿಗೆ ಲಸಿಕೆ ಹಾಕಿದ್ದು, ಕಳೆದ 24 ಗಂಟೆಗಳಲ್ಲಿ 16 ಲಕ್ಷದ 38 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದೆ.
key words : Corona-Case-Increase-3 states-50 districts-Study-Tour