ನಾಗಮಂಗಲದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ : ಆಡಳಿತಾತ್ಮಕ ಅನುಮೋದನೆ

ಮಂಡ್ಯ,ಫೆಬ್ರವರಿ,19,2025 (www.justkannada.in): 2023-24ನೇ ಸಾಲಿನ ರಸ್ತೆ ಸುರಕ್ಷತಾ ನಿಧಿಯ ಕ್ರಿಯಾ ಯೋಜನೆಯಡಿ  ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು ನಾಗಮಂಗಲದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು 698  ಲಕ್ಷ ರೂ. ಅಂದಾಜು ವೆಚ್ಚದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಇವರ ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Automated test track , Nagamangala,  Administrative,  approval