ಮಂಡ್ಯ,ಸೆಪ್ಟಂಬರ್,12,2024 (www.justkannada.in): ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 52 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಒಬ್ಬರಿಗೊಬ್ಬರು ಘರ್ಷಣೆ ಮಾಢಿಕೊಂಡಿದ್ದಾರೆ ಗಲಾಟೆ ವೇಳೆ ಬೈಕ್ ಗಳು, ಅಂಗಡಿಗೆ ಬೆಂಕಿ ಹಾಕಿದ್ದಾರೆ ಗಣೇಶ ವಿಸರ್ಜನೆ ವೇಳೆ ಆ ಕಡೆಯಿಂದ ಕಲ್ಲು ತೂರಾಟ ನಡೆದಿದ್ದು, ಅದಕ್ಕೆ ಈ ಕಡೆಯಂದಲೂ ಕಲ್ಲು ತೂರಾಟ ಮಾಡಿದ್ದಾರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಘಟನೆ ಸಂಬಂಧ 52 ಮಂದಿ ಬಂಧಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ನಾಗಮಂಗಲದಲ್ಲಿ ದರ್ಗಾದ ಎದುರುಗಡೆ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದ್ದು, ಅದರ ಬೆನ್ನಲ್ಲಿಯೇ ಕೋಮು ಕಿಡಿಗೇಡಿಗೇಡಿಗಳು ಸಿಕ್ಕ ಸಿಕ್ಕ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಅಂಗಡಿ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿದೆ.
Key words: Nagamangala, Riot case, 52 people arrest, Minister, Parameshwar