ಬೆಂಗಳೂರು,ಆ,16,2019(www.justkannada.in): ಪ್ರವಾಹ ಪೀಡಿತ ಪ್ರದೇಶಗಳಿಗೆ 10 ಕೋಟಿ ನೆರವು ನೀಡುವ ಸಂಸ್ಥೆಗಳ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಆಕ್ಷೇಪ ಕೇಳಿ ಬಂದಿರುವ ಹಿನ್ನೆಲೆ, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿರುವ ಸಿಎಂ ಬಿಎಸ್ ವೈ, ಪ್ರವಾಹ ಪೀಡಿತ ಗ್ರಾಮಗಳ ಹೆಸರು ಬದಲಾವಣೆ ಇಲ್ಲ. ಪ್ರವಾಹ ಭಾದಿತ ಪ್ರದೇಶಗಳಿಗೆ 10 ಕೋಟಿ ರೂ ನೆರವು ನೀಡುವ ದಾನಿಗಳ ಹೆಸರನ್ನು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾಗುವ ಬಡಾವಣೆಗಳಿಗೆ ನಾಮಕರಣ ಮಾಡಲಾಗುವುದೇ ಹೊರತು ಯಾವುದೇ ಗ್ರಾಮಗಳ ಹೆಸರು ಬದಲಾವಣೆ ಮಾಡುವುದಿಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ 10 ಕೋಟಿ ನೆರವು ನೀಡುವ ಸಂಸ್ಥೆಗಳ ಹೆಸರು ನಾಮಕರಣ ಮಾಡಲು ನಿರ್ಧರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
Key words: name -change – flood -affected –villages-CM BS Yeddyurappa -clarified