ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ನಮ್ಮಮೆಟ್ರೋ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಎಫ್ ಕೆಸಿಸಿ ಐ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರಕಾರ ಆದ್ಯತೆ ನೀಡಿದೆ. ಮುಂದಿನ ಏಳೆಂಟು ತಿಂಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.