ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆ ಬರೆ : ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಳ

ಬೆಂಗಳೂರು,ಮಾರ್ಚ್,27,2025 (www.justkannada.in): ಈಗಾಗಲೇ ವಿದ್ಯುತ್, ಬಸ್ ಟಿಕೆಟ್ ದರ ಏರಿಕೆಯಿಂದ ತತ್ತರಿಸುರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಹೌದು  ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡಲಾಗಿದೆ. ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ  ಸಭೆಯಲ್ಲಿ ರಾಜ್ಯದಲ್ಲಿ ನಂದಿನಿ ಹಾಲಿನದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು , ಸಿಎಂ ಸಿದ್ಧರಾಮಯ್ಯ ಹಾಲಿನ ಒಕ್ಕೂಟದೊಂದಿಗೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಳಿಕ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ  ಸಿಕ್ಕಿದೆ.

Key words: Nandini milk,  price,  hiked, Rs 4 per liter