ಬೆಳಗಾವಿ,ಅಕ್ಟೋಬರ್,31,2022(www.justkannada.in): ಈಗಾಗಲೇ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟಲಿದೆ.
ಹೌದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಿಸ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕಿತ್ತೂರು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿಈ ಕುರಿತು ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ರಾಜ್ಯದ 16 ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಇನ್ನೂ ಗ್ರಾಹಕರಿಗೆ ಹೆಚ್ಚು ಮಾಡಿದ ಹಣವನ್ನ ರೈತರಿಗೆ ಕೊಡಲು ತೀರ್ಮಾನ ಮಾಡಿದ್ದೇವೆ. ದರ ಪರಿಷ್ಕರಣೆಯಿಂದ ಬಂದ ಹಣ ಸಂಪೂರ್ಣವಾಗಿ ರೈತರಿಗೆ ಸಿಗಲಿದೆ. ಹೀಗಾಗಿ ಅತೀ ಶೀಘ್ರದಲ್ಲಿ ಮೂರು ರೂಪಾಯಿ ಹಾಲಿನ ದರ ಏರಿಸುತ್ತೇವೆ. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
Key words: Nandini- milk – Rs 3 per –liter- increase-Balachandra Jarakiholi