ನವದೆಹಲಿ,ಏಪ್ರಿಲ್,8,2023(www.justkannada.in): ರಾಜ್ಯದಲ್ಲಿ ಕೆಎಂಎಫ್ ನಂದಿನಿ ಮುಗಿಸಿ ಗುಜರಾತ್ ಉತ್ಪನ್ನ ಅಮುಲ್ ಹೆಚ್ಚು ಅದ್ಯತೆ ನೀಡಲು ಸಂಚು ರೂಪಿಸಲಾಗಿದೆ ಎಂ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಂದಿನಿ ರಾಷ್ಟ್ರಮಟ್ಟದ ಬ್ರ್ಯಾಂಡ್ ಆಗಿದ್ದು, ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಶದಲ್ಲಿ ನಂದನಿ ಬ್ರ್ಯಾಂಡ್ ನಂ.1 ಸ್ಥಾನಕ್ಕೆ ಏರಲಿದೆ. ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕ ಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನ ವೃದ್ಧಿಗೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಹಾಲು ಉತ್ಪಾದನೆಗೆ ಪ್ರೋತ್ಸಹ ಧನ ಕೊಟ್ಟಿದ್ದು ನಾವು. ಆದರೆ ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ನಾಳೆ ಸಂಜೆ ಸಂಸದೀಯ ಮಂಡಳಿ ಸಭೆ ಇದೆ. ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಮಾಹಿತಿ ನೀಡಿದರು.
Key words: Nandini – national- brand: Politics – Congress -Amul – CM Bommai