ಬೆಂಗಳೂರು, ಆಗಸ್ಟ್ 23, 2020 (www.justkannada.in): ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ.
ಡಾ.ನಾಗೇಂದ್ರ ಆತ್ಮಹತ್ಯೆ ವಿಚಾರವಾಗಿ ಹಲವು ಅಂಶಗಳನ್ನು ಲಿಖಿತ ರೂಪದಲ್ಲಿ ನೀಡಿದ ಪಿಡಿಒಗಳು. ಈ ಅಂಶಗಳನ್ನು ತನಿಖೆಗೆ ಪರಿಗಣಿಸುವಂತೆ ಒತ್ತಾಯ ಮಾಡಿದ್ದಾರೆ.
“ನಾಗೇಂದ್ರ ಯಾವುದಾದರೂ ವೈಯಕ್ತಿಕ ಸಮಸ್ಯೆ ಎದುರಿಸುತ್ತಿದ್ದರೆ ? ಸರ್ಕಾರದ ನಿಯಮದ ಪ್ರಕಾರ ಡಾ ನಾಗೇಂದ್ರ ಕೇಂದ್ರ ಸ್ಥಾನದಲ್ಲಿ ಇರಬೇಕಾಗಿತ್ತು. ನಂಜನಗೂಡು ಬಿಟ್ಟು ಮೈಸೂರಿನಲ್ಲಿ ಇದ್ದಿದ್ದು ಏಕೆ ? ಎಷ್ಟು ಸಮಯ ಅವರು ನಂಜನಗೂಡಿನಲ್ಲಿ ಇರುತ್ತಿದ್ದರು. ಡಾ.ನಾಗೇಂದ್ರ ಕೆಲಸ ಒತ್ತಡದ ಬಗ್ಗೆ ವೈದ್ಯರ ಸಂಘಕ್ಕೆ ಏಕೆ ದೂರು ನೀಡಿಲ್ಲ?
ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಾಗ ಅವರ ಪತ್ನಿ ಎಲ್ಲಿದ್ದರು ? ನಾಗೇಂದ್ರ ಹೊರತುಪಡಿಸಿ ಬೇರೆ ತಾಲೂಕು ಆರೋಗ್ಯಾಧಿಕಾರಿಗಳು ಒತ್ತಡ, ಟಾರ್ಗೆಟ್ ಬಗ್ಗೆ ಏಕೆ ಮಾತನಾಡಿಲ್ಲ? ಡಾ ನಾಗೇಂದ್ರಗೆ ಟಾರ್ಗೆಟ್ ಮುಗಿಸಲು ಏಕೆ ಸಾಧ್ಯವಾಗಿರಲಿಲ್ಲ ? ಸೌಲಭ್ಯಗಳನ್ನು ನೀಡಿಲ್ಲವಾದರೆ ಏಕೆ ಈ ವಿಚಾರ ಅವರು ತಿಳಿಸಿಲ್ಲ?
ಹೀಗೆ ಒಟ್ಟು17 ಅಂಶಗಳನ್ನು ಪಟ್ಟಿ ಮಾಡಿದ ಪಿಡಿಒಗಳು ಅದನ್ನು ಮನವಿ ಪತ್ರದಲ್ಲಿ ಬರೆದು. ಪ್ರಾದೇಶಿಕ ಆಯುಕ್ತರಿಗೆ ನೀಡಲು ಮುಂದಾಗಿದ್ದಾರೆ.