ಶಹಜಹಾನ್‌ಪುರ್,ಜನವರಿ,12,2021(www.justkannada.in): ಜೈಪುರ-.ದೆಹಲಿ ಗಡಿಯಲ್ಲಿರುವ ಶಹಜಹಾನ್‌ಪುರ್ ರೈತ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.
ರೈತ ವಿರೋಧಿ ಕಾನೂನುಗಳನ್ನು ಲಾಕ್ ಡೌನ್ ಅವಧಿಯಲ್ಲಿ ಅವಸರದಲ್ಲಿ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೇಧಾ ಪಾಟ್ಕರ್ ಅವರು, ” ಇತ್ತ ಬಿಜೆಪಿ ಸರ್ಕಾರ ಕಾನೂನುಗಳನ್ನು ಜಾರಿಗೆ ತಂದು, ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಇದೇ ಪಕ್ಷದ ಮುಖ್ಯಮಂತ್ರಿ ಶಿವರಾಜ್ ಸಿಂಘ್ ಚೌಹಾಣ್, ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಬರಲಿ ಅವರನ್ನು ಬಂಧಿಸಲಾಗುವುದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಬಿಜೆಪಿ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದರು.
ಇಂಥ ಕಾನೂನು ವಿರೋಧಿಸಿ ರೈತರು ನಡೆಸಿರುವ ಈ ಮಹಾ ಹೋರಾಟ, ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತದೆ ಮತ್ತು ಶೋಷಿತರು ದನಿ ಎತ್ತುವುದಕ್ಕೆ ನೆರವಾಗುತ್ತಿದೆ ಎಂದು ಹೇಳಿದರು.
Key words: Narmada Bachao Movement– leader-Medha Patkar-support-farmer-protest