ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂದಿ ವಿರುದ್ಧ ಇಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ,ಏಪ್ರಿಲ್,15,2025 (www.justkannada.in):  ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ  ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇಡಿ ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು.

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿಕೆ ಮಾಡಿದೆ. ಗಾಂಧಿ ಕುಟುಂಬ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಯಂತ್ರಿಸುತ್ತಿದ್ದ ಆರೋಪವನ್ನ ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದೆ ಎನ್ನಲಾಗಿದೆ.

Key words: National Herald case, Sonia Gandhi, Rahul Gandhi. Charge Sheet, ED