ನೀಟ್ ಅಕ್ರಮದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ- ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡರ ಮಾತು

ನವದೆಹಲಿ, ಜೂನ್, 28,2024 (www.justkannada.in): ನೀಟ್‌ ಪರೀಕ್ಷಾ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆ ಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದರು.

ನೀಟ್ ಅಕ್ರಮ ಕುರಿತು  ರಾಜ್ಯ ಸಭೆಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ನೀಟ್‌ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗುತ್ತಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ತನಿಖೆ ಪೂರ್ಣಗೊಳಿಸುವ ಹೊಣೆ ಕೇಂದ್ರ ಸರ್ಕಾರದ ಮೇಲಿದೆ. ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆ ಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.

ಹಾಗೆಯೇ ರಾಷ್ಟ್ರಪತಿಗಳು ಸಹ ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು.

Key words: NEET, illegality,  HD Deve Gowda, Rajya Sabha