ಬೆಂಗಳೂರು, ಫೆಬ್ರವರಿ,20,2024(www.justkannada.in): ತಾಂತ್ರಿಕ ದೋಷದಿಂದಾಗಿ ಬೆಂಗಳೂರಿನ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಮೆಟ್ರೋ ಪ್ರಯಾಣಿಕರು ಬೆಳ್ಳಂ ಬೆಳಗ್ಗೆ ಪರದಾಡುವ ಸ್ಥಿತಿ ಉಂಟಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದ್ದು ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನ ದಟ್ಟಣೆ ಉಂಟಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆಂದ ಬಿಎಂಆರ್ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋ ತಾಂತ್ರಿಕ ತೊಂದರೆ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಿಎಂಆರ್ಸಿಎಲ್, ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಇದರಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆಯಾಗುತ್ತದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ನಮ್ಮ ತಂಡಗಳು ಕೆಲಸ ಮಾಡುತ್ತಿವೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದ ಟ್ವೀಟ್ ಮಾಡಿದೆ.
ನೇರಳೆ ಮಾರ್ಗದಲ್ಲಿ ಸುಮಾರು 45 ನಿಮಿಷದಿಂದ ಯಾವುದೇ ಮೆಟ್ರೋ ರೈಲುಗಳು ಸಂಚರಿಸುತ್ತಿಲ್ಲ. ಮೆಟ್ರೋ ನಿಲ್ದಾಣಗಳಲ್ಲಿಯೇ ಪ್ರಯಾಣಿಕರು ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
Key words: nerale line- metro –traffic-bangalore