ನೇತಾಜಿ ಸುಭಾಷ್ ಚಂದ್ರ ಬೋಸ್ ವಿಚಾರ ಮೈಗೂಡಿಸಿಕೊಳ್ಳಿ: ಶಾಸಕ ಟಿ.ಎಸ್ ಶ್ರೀವತ್ಸ

 

ಮೈಸೂರು,ಜನವರಿ,23,2025 (www.justkannada.in): ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು.  ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ತಿಳಿಸಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಕೆಎಂಪಿಕೆ ಟ್ರಸ್ಟ್ ಸಹಯೋಗದೊಂದಿಗೆ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 128ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಟಿ ಎಸ್ ಶ್ರೀವತ್ಸ ಮಾತನಾಡಿದರು.

ಬಿಜೆಪಿ ನಗರ ಅಧ್ಯಕ್ಷ  ಎಲ್ ನಾಗೇಂದ್ರ ಮಾತನಾಡಿ, ‘ಸುಭಾಷ್ ಚಂದ್ರ ಬೋಸ್‌ ಅವರ ವಿಚಾರಗಳು ಯುವಜನತೆಗೆ ಪ್ರೇರಣೆಯ ಕಥನಗಳಾಗಿವೆ. ಸ್ವತಂತ್ರ ಹೋರಾಟದಲ್ಲಿ ರಾಜೀ ರಹಿತ ಹೋರಾಟ ಮಾಡಿದ್ದರು. ತಮ್ಮ ಬಾಲ್ಯದಿಂದಲೂ ಇಡೀ ದೇಶದ ಜನರ ವಿಮುಕ್ತಿಗಾಗಿ, ಶೋಷಣೆಯಿಂದ ಹೋರಾಟ ಮಾಡಿದ್ದರು ಎಂದು ಸ್ಮರಿಸಿದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 40ಕ್ಕೂ ಹೆಚ್ಚು ದೇಶಭಕ್ತರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ, ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ವಕೀಲರಾದ ಜಯಶ್ರೀ ಶಿವರಾಂ ,ಸವಿತಾ ಘಾಟ್ಕೆ, ದಿವ್ಯ, ರೂಪ. ಚಾಮರಾಜ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷ ರವಿಕುಮಾರ್ ಮುಂತಾದವರು ಇದ್ದರು.

Key words: idea, ​​Netaji Subhas Chandra Bose,  MLA, TS Srivatsa, mysore