ಬೆಂಗಳೂರು,ಮೇ,20,2023(www.justkannada.in): ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗಳಿಸಿ ಬಹಮತ ಪಡೆದು ಕಾಂಗ್ರೆಸ್ ಅಧಿಕಾರದ ಗದ್ದುಗೆಗೇರಿದ್ದು ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ನೊಣವಿನಕೆರೆಯ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಹತ್ತು ವರ್ಷಗಳ ನಂತರ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಈ ಹಿಂದೆ ಇದೇ ವೇದಿಕೆಯಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಸಿದ್ಧರಾಮಯ್ಯ 2ನೇ ಬಾರಿ ರಾಜ್ಯದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರುನೂತನ ಸಿಎಂ, ಡಿಸಿಎಂ ಪದಗ್ರಗಣ ಕಾರ್ಯಕ್ರಮಕ್ಕೆ ಕೇಂದ್ರದ ಘಟಾನುಘಟಿ ನಾಯಕರು, ಗಣ್ಯರು ಸಾಕ್ಷಿಯಾದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್, ನಟ ಕಮಲ್ ಹಾಸನ್, ಬಿಹಾರ ಸಿಎಂ ನಿತೀಶ್ ಕುಮಾರ್ ,ಪುದುಚೇರಿ ಮಾಜಿ ಸಿಎಂ ನಾರಾಯಣಸ್ವಾಮಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಕೊಂಡಿದ್ದರು.
ಹಾಗೆಯೇ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಗೀತಾ ಶಿವರಾಜ್ ಕುಮಾರ್, ಕಮಲ್ ಹಾಸನ್, ದುನಿಯಾ ವಿಜಯ್ ಭಾಗಿಯಾಗಿದ್ದರು.
Key words: new CM- Siddaramaiah – DCM -DK Shivakumar -taking oath