ನವದೆಹಲಿ,ಡಿ,8,2019(www.justkannada.in): ನವದೆಹಲಿಯ ರಾಣಿ ಝಾನ್ಸಿ ರಸ್ತೆಯ, ಆಂಜ್ ಮಂಡಿ ಪ್ರದೇಶದದಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ಮೃತಪಟ್ಟರುವವರ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಹಾಗೂ ಘಟನೆಯಲ್ಲಿ ಗಾಯಗೊಂಡಿರುವವರಿಗೆ ತಲಾ 1 ಲಕ್ಷ ಪರಿಹಾರ ಜತೆಗೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಅಗ್ನಿ ಅವಘಡದಲ್ಲಿ 43 ಮಂದಿ ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ತನಿಖೆ ನಡೆಸಲು ಸಿಎಂ ಕೇಜ್ರಿವಾಲ್ ಸೂಚನೆ…
ಘಟನೆ ಸಂಬಂಧ ಕಟ್ಟಡ ಮಾಲೀಕರ ವಿರುದ್ದ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಿ 7 ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. ಘಟನೆ ಬಳಿಕ ಕಟ್ಟಡ ಮಾಲೀಕ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
Key words: New Delhi-fire- relief – dead family – CM Arvind Kejriwal