ಬೆಂಗಳೂರು, ನವೆಂಬರ್ 4, 2022(www.justkannada.in): ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಮಾಧ್ಯಮದವರ ಜೊತೆ ಸಚಿವ ಸುಧಾಕರ್ ಮಾತನಾಡಿದರು.
ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್ ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್ ನೋಟಿಸ್ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.
ಕರಾಳ ಘಟನೆ
ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು.
ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.
ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಹಿರಂಗ ಸವಾಲು
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.
ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು ಎಂದರು.
Key words: New law – punish –misbehaving- doctors – staff -Govt hospitals-minister-Sudhakar
ENGLISH SUMMARY…
New law to fix accountability and punish misbehaving doctors and staff in Govt hospitals
Patients need not furnish any documents in during emergency
Saving lives utmost important, not documents
Bengaluru, November 4, Friday
If doctors and staff in govt hospitals misbehave with people, they will be terminated from service. I will speak to Chief Minister in this regard and if need be we will bring necessary amendments to laws in the next session of the assembly, said Health and Medical medication Minister Dr.K.Sudhakar.
Speaking about the death of pregnant woman and two newborns in Tumkur District Hospital minister Dr.K.Sudhakar said the girl who has now lost her mother has been admitted to orphanage home. A fixed deposit of Rs.5Lakh has been made in the girl’s name from the government. Govt will also take care of her education. District surgeon, doctors and other staff who are found to be responsible for this have been issued showcase notice and have been asked to respond within 24 hours.
Incidents like these must never repeat again. In cases of emergency, hospitals should not insist on documents. Documents can be collected after the attending the emergency. There are about 76 notified emergency services and instructions are already in place to not deny or delay treatment in such cases. In case treatment is not available in government hospitals people can avail it in private hospitals also and govt will bear the cost.
Unfortunate incident
Incidents like these are unacceptable and it is a blot on humanity. I express my sincere regret and I feel extremely sorry for the woman and the two newborns who left this world even before they could see it.
Police Dept has been trying to trace the family of the woman since last 36bhours. If the family is not identified government will take complete responsibility in this case.
“Irrespective of which state the woman belongs to, she should have been treated at the hospital on humanitarian grounds. This incident has indeed created a mistrust on the entire public health system, ” minister expressed his disappointment.
Open Challenge
Responding to Leader of Opposition Siddaramaiah’s comments Dr.Sudhakar said, “I can produce records regarding number of infant deaths that happened in Mysore when Siddaramaiah was CM. Siddaramaiah neither resigned nor sought his health minister’s resignation. If he can stoop so low to politicise a death, he is not just unfit to become a leader but also unfit to be called even a human being. Such incidents should not be politicised, Dr.Sudhakar said.
I will produce documents on the number of deaths happened in govt hospitals during Siddaramaiah’s tenure. If Siddaramaiah is ready to resign as Leader of Opposition then I will step down as health minister, challenged Dr.K.Sudhakar.