ಬೆಂಗಳೂರು,ಜನವರಿ,11,2022(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆಯಿಂದಲೇ ಬಿಗಿ ನಿಯಮಗಳು ಜಾರಿಯಾಗಲಿವೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರು ಅಧಿಕಾರಿಗಳ ವರ್ಚುವಲ್ ಸಭೆ ನಡೆಯಿತು. ಸಭೆಯಲ್ಲಿ ಕೋವಿಡ್ ತಡೆಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಸಭೆ ಬಳಿಕ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ವಸತಿ ಶಾಲೆ ಹಾಸ್ಟಲ್ ಗಳಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ. ಮಕ್ಕಳಲ್ಲಿ ಕೊರೋನಾ ಲಕ್ಷಣ ಹೆಚ್ಚುತ್ತಿದೆ. ಹೀಗಾಗಿ ಶಾಲೆಗಳ ಬಂದ್ ಬಗ್ಗೆ ಅಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ನಿರ್ಧರಿಸಲಾಗಿದೆ. ಮಕ್ಕಳ ಚಿಕಿತ್ಸೆಗೆ ಔಷಧಿ ಕೊರತೆಯಾಗದಂತೆ ಕ್ರಮ. ಮಾರ್ಕೆಟ್ ಗಳನ್ನ ವಿಕೇಂದ್ರಿಕರಿಸಲು ನಿರ್ಧಾರ ಮಾಡಲಾಗಿದೆ. ಪ್ರತಿಭಟನೆ, ಸಭೆ ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ. ಮಾಸ್ಕ್ ಸಾಮಾಜಿಕ ಅಂತರ ಕಡ್ಡಾಯ. ಮಾಡಲಾಗಿದೆ. ಪ್ರತಿಭಟನೆ ಸಭೆ ಸಮಾರಂಭದ ಬಗ್ಗೆ ಮೊದಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಕೋವಿಡ್ ಪ್ರಮಾಣ ಹೆಚ್ಚಳ ಹಿನ್ನೆಲೆ ಟೆಸ್ಟ್ ಪ್ರಮಾಣ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. ಬೂಸ್ಟರ್ ಡೋಸ್ ನೀಡಿಕೆ ಮತ್ತಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಮಕ್ಕಳ ವಾರ್ಡ್ ಬೆಡ್ ಮೀಸಲು, ಆಕ್ಸಿಜನ್ ಬೆಡ್ ಕಾಯ್ದಿರಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ವೈಕುಂಠ ಏಕಾದಶಿಯಂದು ಸಂಪ್ರದಾಯದಂತೆ ಪೂಜೆ ಸಲ್ಲಿಸಬೇಕು. ಹೆಚ್ಚನ ಜನ ಸೇರಬಾರದು. ಬಾರ್ , ರೆಸ್ಟೋರೆಂಟ್ ಓಪನ್ ಬಗ್ಗೆ ಯಥಾಸ್ಥಿತಿ ಮುಂದುವರಿಯಲಿದೆ. ಐಟಿ ಬಿಟಿ ಓಪನ್ ಬಗ್ಗೆಯೂ ಯಥಾಸ್ಥಿತಿ ಮುಂದುವರಿಕೆ. ವೀಕೆಂಡ್ ಕರ್ಫ್ಯೂ ಬಗ್ಗೆ ಸದ್ಯ ನಿರ್ಧಾರ ಮಾಡಿಲ್ಲ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ರೂಲ್ಸ್ ಗಳು ಜಾರಿಯಾಗಲಿದ್ದು, ರೂಲ್ಸ್ ಬ್ರೇಕ್ ಮಾಡಿದ್ರೆ ಕಠಿಣ ಕ್ರಮ ಪಕ್ಕಾ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
Key words: New- tight- rules –covid –home minister-araga jnanendra