ಬೆಂಗಳೂರು,ಡಿಸೆಂಬರ್,31,2024 (www.justkannada.in): ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೊಸ ವರ್ಷಾಚರಣೆ ವೇಳೆಯಲ್ಲಿ ಅಹಿತಕರ ಘಟನೆ ಆಗಬಾರದು ಅನ್ನೋದೇ ನಮ್ಮ ಉದ್ದೇಶ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಸಿದ್ದೇವೆ. ಹೆಚ್ಚು ಜನ ಸೇರುವ ಕಡೆ ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ನಗರದಲ್ಲಿ 7500 ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಏನೇ ಘಟನೆ ಆದರೂ ಕೂಡಲೆ ಗೊತ್ತಾಗುತ್ತೆ. ಕೂಡಲೇ ಕ್ರಮ ಪೊಲೀಸರು ಕೈಗೊಳ್ಳುತ್ತಾರೆ ಎಂದರು.
Key words: New Year, celebrations, Increased, security, Dr. G. Parameshwar