ಬೆಂಗಳೂರು, ನವೆಂಬರ್,26,2020(www.justkannada.in): ನಿನ್ನೆ ರಾತ್ರಿ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಿದ್ದು ಈ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ರಾಮನಗರ,ಚಾಮರಾಜನಗರದಲ್ಲಿ ಯಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯದ ಪ್ರಕಾರ ಬೆಂಗಳೂರಿನ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಮೈಸೂರು ರಸ್ತೆ, ಶಾಂತಿನಗರ ಸೇರಿ ವಿವಿಧ ಕಡೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆ ಆರ್ಭಟ ಜೋರಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ನಿವಾರ್ ಚಂಡಮಾರುತ ಅಪ್ಪಳಿಸಿದೆ. ಭೀಕರ ನಿವಾರ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದೆ ಎನ್ನಲಾಗಿದೆ.
English summary…
Nivar cyclone effect: Yellow alert announced in 8 Districts
Bengaluru, Nov.26, 2020 (www.justkannada.in): Following the Nivar cyclone effect from yesterday night in several coastal districts of Tamil Nadu, the Indian Meteorological Department has informed that there would be rain in Karnataka South Inland and Coastal Districts.
Yellow alert has been announced in several districts including Bengaluru Urban, Bengaluru Rural, Kolar, Chikkaballapura, Mandya, Tumakuru, Ramanagara and Chamarajnagara, expecting heavy rainfall. It is said that there would be heavy rainfall in and around Bengaluru city and surrounding areas.
The Nivar cyclone is as a result of the pressure in the Bay of Bengal. The Tamil Nadu government has announced a holiday following the Nivar cyclone effect.
Keywords: Nivar-cyclone-Tamil Nadu-State Government-Karnataka-Yellow alert
Key words Newar- Hurricane- Effect-Yellow Alert- Declaration – 8 Districts-karnataka