ಬಳ್ಳಾರಿ,ಜೂನ್,22,2021(www.justkannada.in): ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಕಾಂಗ್ರೆಸ್ ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆ ಇದು ಪಕ್ಷದ ಅಭಿಪ್ರಾಯವಲ್ಲ. ಇದು ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ಈ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಸಿಎಂ ಆಗಬೇಕು ಅಂತಾ ಅನೇಕ ಶಾಸಕರು ಹೇಳುತ್ತಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಈ ಬಗ್ಗೆ ಇನ್ನೂ ಯಾರೂ ತೀರ್ಮಾನ ಮಾಡಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಿದ್ದರೂ ಅವರ ಅಭಿಪ್ರಾಯಗಳನ್ನ ಹೊರಹಾಕಬಹುದು. ಚುನಾವಣೆ ಆಗಬೇಕು. ಪಕ್ಷ ಗೆಲ್ಲಬೇಕು. ಇದಾದ ಬಳಿಕೆ ನಾಯಕನನ್ನ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗುತ್ತೆ ಎಂದು ತಿಳಿಸಿದರು.
ಕೊರೋನಾ 2ನೇ ಅಲೆ ತಡೆಯುವಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್ ವೈ ವಿಫಲರಾಗಿದ್ದಾರೆ. 2ನೇ ಅಲೆ ಬಗ್ಗೆ ತಜ್ಞರು ಎಚ್ಚರಿಸಿದರೂ ಸಿಎಂ ಬಿಎಸ್ ಯಡಿಯೂರಪ್ಪ ಸಿದ್ಧತೆ ಮಾಡಿಕೊಳ್ಳಲಿಲ್ಲ. ಲಾಕ್ ಡೌನ್ ಅವಧಿಯಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಲಿಲ್ಲ ಎಂದು ಸಿದ್ಧರಾಮಯ್ಯ ಟೀಕಿಸಿದರು.
ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ ಇದನ್ನ ವಿರೋಧಿಸಿ ಸಿಎಂ ಬಿಎಸ್ ವೈ ಧರಣಿ ಮಾಡಿದ್ದರು. ಈಗ ಇದೇ ಸಿಎಂ ಬಿಎಸ್ ವೈ ಅನುಮತಿ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ಕಿಡಿಕಾರಿದರು.
Key words: next CM –statement-Former CM -Siddaramaiah – not -party -opinion