ಚಾಮರಾಜನಗರ,ಡಿಸೆಂಬರ್,24,2020(www.justkannada.in): ಕೊರೋನಾ ಹೊಸ ಪ್ರಭೇದ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಮಲೈ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರಿಗೆ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ದಿನಾಂಕ 23-12-2020 ರ (ಅಂದರೆ ಸಮಯ 00:01 ಗಂಟೆ 24-12-2020) ಮಧ್ಯರಾತ್ರಿಯಿಂದ 02-01-2021ರ ಬೆಳಿಗ್ಗೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆ ದೇವಾಲಯಕ್ಕೆ ಬರುವ ಎಲ್ಲ ಭಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದೆ.
- ಕೊಠಡಿ ಆನ್ಲೈನಿನಲ್ಲಿ ಕಾಯ್ದಿರಿಸಿರುವ ಭಕ್ತಾದಿಗಳು ರಾತ್ರಿ 10-30ಗಂಟೆಯೊಳಗೆ ಮಹದೇಶ್ವರ ಬೆಟ್ಟಕ್ಕೆ ಬಂದು ಮಾಹಿತಿ ಕೇಂದ್ರದಲ್ಲಿ ನೊಂದಾಯಿಸಿ ಸಂಬಂಧಪಟ್ಟ ವಸತಿ ಗೃಹದೊಳಗೆ ವಾಸ್ತವ್ಯಕ್ಕೆ 10-450ರೊಳಗೆ ತಲುಪತಕ್ಕದ್ದು.
- ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಮಾಹಿತಿ ಕೇಂದ್ರ ಮುಚ್ಚಲಾಗುವುದು ಹಾಗೂ ಯಾವುದೇ ಕೊಠಡಿಗಳನ್ನು ಈ ಸಮಯದಲ್ಲಿ ವಿತರಿಸಲಾಗುವುದಿಲ್ಲ.
- ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಸಂಪೂರ್ಣ ಲಾಕ್ಔಟ್ ಪಾಲಿಸಲಾಗುವುದು. ಯಾವುದೇ ಸಂಚಾರಕ್ಕೆ ಅವಕಾಶವಿರುವುದಿಲ್ಲ.
- ದೇವಸ್ಥಾನ, ಲಾಡು ಕೌಂಟರ್ ಹಾಗೂ ದಾಸೋಹಕ್ಕೆ ಬರುವವರು ರಾತ್ರಿ 10ರ ಒಳಗಾಗಿ ದರ್ಶನ ಪಡೆಯುವುದು, ದಾಸೋಹ ಸ್ವೀಕರಿಸುವುದು ಹಾಗೂ ಲಾಡು ಖರೀದಿಸುವುದು. ರಾತ್ರಿ 10ರ ನಂತರ ಈ ಮೂರೂ ಸೇವೆಗಳು ಲಭ್ಯವಿರುವುದಿಲ್ಲ.
- ಕೊಠಡಿ ಕಾಯ್ದಿರಿಸಿರುವವರು ನಂತರ ಬಂದಲ್ಲಿ ರೀಫಂಡ್ ನೀಡಲಾಗುವುದಿಲ್ಲ. ಈ ಬಗ್ಗೆ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
- ಬೆಳಿಗ್ಗೆ 4ಕ್ಕೆ ಪ್ರಾರಂಭವಾಗುವ ಅಭಿಷೇಕಕ್ಕೆ ಭಕ್ತಾದಿಗಳಿಗೆ ಪ್ರವೇಶವಿರುವುದಿಲ್ಲ. ಆದರೆ ಸಂಪ್ರದಾಯಿಕವಾಗಿ ಅಭಿಷೇಕವನ್ನು ಬೇಡಗಂಪಣರು ಹಾಗೂ ದೇವಾಲಯದ ಒಳಾವರಣದ ಸಿಬ್ಬಂದಿ ನಡೆಸಲಿರುವರು. ಬೆಳಿಗ್ಗೆ 5ರ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.
- ದೇವಾಲಯದ ಆವರಣದಲ್ಲಿ ವಸತಿ ಗೃಹಗಳು, ಕಾಟೇಜುಗಳು ಹಾಗೂ ಡಾರ್ಮಿಟರಿ ಹೊರತುಪಡಿಸಿ, ಬೇರೆ ಯಾವುದೇ ತೆರೆದ ಜಾಗಗಳು ಹಾಗೂ ದೇವಾಲಯದ ಪಕ್ಕದಲ್ಲಿರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆಯ ಷೆಡ್ನಲ್ಲಿ ಉಳಿದುಕೊಳ್ಳಬಾರದಾಗಿ ಮನವಿ.
- ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಶ್ರೀ ಕ್ಷೇತ್ರಕ್ಕೆ ಬರುವುದು ಹಾಗೂ ಶ್ರೀ ಕ್ಷೇತ್ರದಿಂದ ತೆರಳುವವರೆಗೆ ಧರಿಸಿರಲು ಕೋರಿದೆ. ವೈಯುಕ್ತಿಕವಾಗಿ ಸ್ಯಾನಿಟೈಸರ್ ಇಟ್ಟುಕೊಳ್ಳಲು ಹಾಗೂ ಆಗ್ಗಾಗ್ಗೆ ಉಪಯೋಗಿಸಲು ಕೋರಿದೆ.
- ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವುದು. ವಿಶೇಷವಾಗಿ ದೇವಸ್ಥಾನದ ಕ್ಯೂ ಲೈನಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡೇ ದರ್ಶನ ಮಾಡುವುದು.
- ದಾಸೋಹದಲ್ಲಿ ಕಡ್ಡಾಯವಾಗಿ ಕ್ಯೂ ಲೈನಿನಲ್ಲಿ ಹಾಗೂ ಕುಳಿತುಕೊಳ್ಳುವ ಮೇಜಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
- ಯಾವುದೇ ಸಂದೇಹವಿದ್ದಲ್ಲಿ ಮಾಹಿತಿ ಕೇಂದ್ರದಲ್ಲಿ ನಿರ್ವಹಣೆಯಲ್ಲಿರುವ ಸಹಾಯವಾಣಿ ನಂಬರು.
1860 425 4350 ಗೆ ಕರೆ ಮಾಡುವುದು.
English summary…
Night Curfew: Devotees who visit MM Hills have to follow the following restrictions compulsorily
Chamarajanagara, Dec. 24, 2020 (www.justkannada.in): The State Government has announced curfew from 11.00 pm to 5.00 am following the fear of new corona virus strain. The Malai Mahadeshwaraswami Area Development Authority has requested the devotees who visit the temple to follow the following guidelines strictly from Dec. 23, 2020 to January 1, 2021.
1. Devotees who have reserved rooms online should report within 10.30 pm and register their names at the Information Centre atop the hill and check-in within 10.45pm.
2. The Information Centre will be closed from 11.00 pm to 5.00 am and rooms will not be given during this period.
3. Complete lockdown will be followed atop the MM hills from 11.00 pm to 5.00 am. There will not be any vehicular traffic.
4. Devotees who visit the temple and come for Laddu counter and meals should do so within 10.00 pm. No services will be available after that.
5. If those who have reserved rooms come after 10.30 pm, rooms will not be provided. There shall be no letter communication in this regard.
For more details please call 18604254350
Keywords: MM Hills/ Corona/ Night curfew/ restrictions
Key words: Night curfew -Devotees Malai Mahadeshwara hill -follow -these rules.