ಬೆಂಗಳೂರು,ಏಪ್ರಿಲ್,14,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಸಂಬಂಧ ಅಗತ್ಯವಿದ್ದರೇ ನೈಟ್ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. 8 ಜಿಲ್ಲೆಗಳಲ್ಲಿ ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿದೆ. ತಜ್ಞರ ಜತೆ ಚರ್ಚಿಸಿ ಅಗತ್ಯವಿದ್ದರೇ ನೈಟ್ ಕರ್ಫ್ಯೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಲಾಕ್ ಡೌನ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಲಾಕ್ ಡೌನ್ ಜಾರಿ, ವೀಕೆಂಡ್ ಲಾಕ್ ಡೌನ್ ಪ್ರಸ್ತಾಪವಿಲ್ಲ . ಲಾಕ್ ಡೌನ್ ಸಂಬಂಧ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
Key words: Night curfew – necessary-lockdown-CM BS Yeddyurappa