ಮೈಸೂರು,ಜನವರಿ,20,2022(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಗಳು ಮುಖ್ಯಮಂತ್ರಿಗಳೊಬ್ಬರ ತೀರ್ಮಾನವಲ್ಲ. ತಜ್ಞರ ಸಲಹೆ ಮೇರೆಗೆ ಸಚಿವ ಸಂಪುಟ ಸದಸ್ಯರು ಸೇರಿ ತೀರ್ಮಾನ ಮಾಡುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಮೂರನೇ ಅಲೆ ಗಂಭೀರವಲ್ಲದಿದ್ದರೂ ಸ್ವಲ್ಪಮಟ್ಟಿಗೆ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಸಿಎಂಗೂ ಜನಾಭಿಪ್ರಾಯದ ಬಗ್ಗೆ ಮಾಹಿತಿಯಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಪೊಲೀಸರು, ವಿದ್ಯಾರ್ಥಿಗಳು, ಶಿಕ್ಷಕರು ಎಲ್ಲರಲ್ಲೂ ಸೋಂಕು ಬಂದಿದೆ. ಸೋಂಕಿನ ಗುಣಲಕ್ಷಣ ಇರುವವರನ್ನು ಮಾತ್ರ ನಾವು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ಕಡೆಗಳಲ್ಲಿ ಎಲ್ಲಾ ಜನರನ್ನು ಟೆಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ನಮ್ಮಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಿದೆ. ಸಂಜೆ ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದೇನೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
Key words: Night Curfew-Weekend Curfew- CM -Minister -ST Somashekhar.