ನೈಟ್ ಕರ್ಫ್ಯೂ ವಾಪಸ್ ಪಡೆದ ರಾಜ್ಯ ಸರ್ಕಾರ …

ಬೆಂಗಳೂರು,ಡಿಸೆಂಬರ್,24,2020(www.justkannada.in):  ನೈಟ್ ಕರ್ಫ್ಯೂ ಬಗ್ಗೆ ಹಲವು ಟೀಕೆ ವ್ಯಕ್ತವಾದ ಬೆನ್ನಲ್ಲೆ ಸರ್ಕಾರ ಇದೀಗ ನೈಟ್ ಕರ್ಫ್ಯೂ ವಾಪಸ್ ಪಡೆದಿದೆ.

ಒಂದೇ ದಿನಕ್ಕೆ ನೈಟ್ ಕರ್ಫ್ಯೂ ವಾಪಸ್ ಪಡೆಯಲಾಗಿದ್ದು   ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪರಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Teachers,solve,problems,Government,bound,Minister,R.Ashok

ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

key words: night curfew -withdrawn -state Government