ರಾಮನಗರ, ಅಕ್ಟೋಬರ್,21,2022(www.justkannada.in): ಮುಂದಿನ ವಿಧಾನಸಭಾ ಚುನಾವಣೆಗೆ ಹಲವು ಕಡೆಗಳಲ್ಲಿ ಸ್ಪರ್ಧಿಸಲು ನಿಖಿಲ್ ಗೆ ಕರೆ ಬಂದಿದೆ. ಆದರೆ ನಿಖಲ್ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯ ಬಳಿ ಸೇತುವೆ ಕುಸಿತವಾದ ಹಿನ್ನೆಲೆ ಸ್ಥಳಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಹಲವು ಕ್ಷೇತ್ರಗಳಲ್ಲಿ ನಿಲ್ಲುವಂತೆ ನಿಖಿಲ್ ಗೆ ಆಹ್ವಾನ ಬಂದಿದೆ. ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ. ನವೆಂಬರ್ 1ರಂದು ಪಂಚರತ್ನ ಯೋಜನೆ ಜಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಟೀ. ನರಸೀಪುರ, ಪಿರಿಯಾಪಟ್ಟಣದಲ್ಲಿ ಹಾಲಿ ಶಾಸಕರಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡರು ಇದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಹರೀಶ್ ಗೌಡ ನಿಲ್ಲಿಸಲು ನಿರ್ಣಯ ಮಾಡಲಾಗಿದೆ. ಹೆಚ್.ಡಿ ಕೋಟೆ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಒಬ್ಬರು ಒಮ್ಮತದ ತೀರ್ಮಾನಕ್ಕೆ ಬರುವಂತೆ ಹೇಳಿದ್ದೇನೆ. 15 ರಿಂದ 20 ದಿನದೊಳಗೆ ಮಾಹಿತಿ ಪಡೆದು ತೀರ್ಮಾನ ಮಾಡಲಾಗುತ್ತದೆ. ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಪಕ್ಷವೇ ತೀರ್ಮಾನಿಸುತ್ತೆ ಎಂದರು.
Key words: Nikhil –compete- election-former CM-HD Kumaraswamy.